2 ಸಮುಯೇಲ 19:1 - ಪರಿಶುದ್ದ ಬೈಬಲ್1 ಈ ಸುದ್ದಿಯನ್ನು ಜನರು ಯೋವಾಬನಿಗೆ ತಿಳಿಸಿದರು. ಅವರು ಯೋವಾಬನಿಗೆ, “ನೋಡು, ರಾಜನು ಅಳುತ್ತಿದ್ದಾನೆ ಮತ್ತು ಅಬ್ಷಾಲೋಮನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.