2 ಸಮುಯೇಲ 19:13 - ಪರಿಶುದ್ದ ಬೈಬಲ್13 ಅಲ್ಲದೆ ಅಮಾಸನಿಗೆ, ‘ನೀನು ನನ್ನ ಕುಟುಂಬದ ಒಂದು ಭಾಗವಾಗಿರುವೆ. ನಾನು ನಿನ್ನನ್ನು ಯೋವಾಬನ ಸ್ಥಾನದಲ್ಲಿ ಸೇನಾಪತಿಯನ್ನಾಗಿ ಮಾಡದೆ ಹೋದರೆ, ದೇವರು ನನ್ನನ್ನು ದಂಡಿಸಲಿ’ ಎಂದು ಹೇಳಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿ |