2 ಸಮುಯೇಲ 19:15 - ಪರಿಶುದ್ದ ಬೈಬಲ್15 ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಜೋರ್ಡನಿಗೆ ಬಂದಾಗ ಯೆಹೂದಕುಲದವರು ಅವನನ್ನು ಸ್ವಾಗತಿಸುವುದಕ್ಕೂ ಜೋರ್ಡನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದಕುಲದವರು ಅವನನ್ನು ಎದುರುಗೊಳ್ಳುವದಕ್ಕೂ ಯೊರ್ದನ್ ಹೊಳೆಯನ್ನು ದಾಟಿಸುವದಕ್ಕೂ ಗಿಲ್ಗಾಲಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು. ಅಧ್ಯಾಯವನ್ನು ನೋಡಿ |