“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.
“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.
ಮೀಕಲಳ ಗಂಡನಾದ ಪಲ್ಟೀಯೇಲನೂ ಅವಳ ಜೊತೆಗೆ ಬಂದನು. ಮೀಕಲಳ ಜೊತೆಯಲ್ಲಿ ಬಹುರೀಮಿಗೆ ಬರುವಾಗ ಪಲ್ಟೀಯೇಲನು ಆಳುತ್ತಿದ್ದನು. ಆದರೆ ಅಬ್ನೇರನು, “ನಿನ್ನ ಮನೆಗೆ ಹಿಂದಿರುಗಿ ಹೋಗು” ಎಂದು ಪಲ್ಟೀಯೇಲನಿಗೆ ಹೇಳಿದನು. ಆದ್ದರಿಂದ ಪಲ್ಟೀಯೇಲನು ಮನೆಗೆ ಹಿಂದಿರುಗಿದನು.
“ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.