2 ಸಮುಯೇಲ 19:22 - ಪರಿಶುದ್ದ ಬೈಬಲ್22 ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು. ಅಧ್ಯಾಯವನ್ನು ನೋಡಿ |