2 ಸಮುಯೇಲ 19:24 - ಪರಿಶುದ್ದ ಬೈಬಲ್24 ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿ |
“ಗೇರನ ಮಗನಾದ ಶಿಮ್ಮಿಯು ನಿನ್ನೊಡನೆ ಇಲ್ಲಿದ್ದಾನೆಂಬುದನ್ನು ಜ್ಞಾಪಿಸಿಕೊ. ಅವನು ಬಹುರೀಮಿನ ಬೆನ್ಯಾಮೀನ್ ಕುಲದವನು. ನಾನು ಮಹನಯಿಮಿಗೆ ಓಡಿಹೋದ ಆ ದಿನದಂದು ಅವನು ನನ್ನ ವಿರುದ್ಧವಾಗಿ ಬಹಳವಾಗಿ ಶಪಿಸಿದ್ದನ್ನು ಜ್ಞಾಪಿಸಿಕೊ. ನಂತರ ಅವನು ನನ್ನನ್ನು ಜೋರ್ಡನ್ ನದಿಯ ಹತ್ತಿರ ಭೇಟಿಮಾಡಲು ಬಂದನು. ಆದರೆ ನಾನು ಯೆಹೋವನ ಸನ್ನಿಧಿಯಲ್ಲಿ, ‘ಶಿಮ್ಮಿ ನಾನು ನಿನ್ನನ್ನು ಕೊಲ್ಲುವುದಿಲ್ಲ’ ಎಂದು ವಾಗ್ದಾನ ಮಾಡಿದೆನು.