2 ಸಮುಯೇಲ 19:25 - ಪರಿಶುದ್ದ ಬೈಬಲ್25 ಮೆಫೀಬೋಶೆತನು ರಾಜನನ್ನು ನೋಡಲು ಜೆರುಸಲೇಮಿನಿಂದ ಬಂದನು. ರಾಜನು ಅವನಿಗೆ, “ಮೆಫೀಬೋಶೆತನೇ, ನಾನು ಜೆರುಸಲೇಮಿನಿಂದ ಓಡಿಹೋದಾಗ ನೀನು ನನ್ನೊಡನೆ ಏಕೆ ಬರಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇವನು ಜೆರುಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಏಕೆ ಬರಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇವನು ಯೆರೂಸಲೇವಿುನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು - ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು. ಅಧ್ಯಾಯವನ್ನು ನೋಡಿ |
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.