Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:30 - ಪರಿಶುದ್ದ ಬೈಬಲ್‌

30 ಮೆಫೀಬೋಶೆತನು ರಾಜನಿಗೆ, “ಚೀಬನೇ ಎಲ್ಲಾ ಭೂಮಿಯನ್ನು ತೆಗೆದುಕೊಳ್ಳಲಿ. ನನ್ನ ಒಡೆಯನಾದ ರಾಜನು ತನ್ನ ಸ್ವಂತ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:30
7 ತಿಳಿವುಗಳ ಹೋಲಿಕೆ  

ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ನನ್ನ ಸೋದರನಾದ ಯೋನಾತಾನನೇ, ನಿನಗಾಗಿ ನಾನು ದುಃಖಿಸುವೆ! ನಿನ್ನ ಗೆಳೆತನವು ನನಗೆ ಉಲ್ಲಾಸದಾಯಕವಾಗಿತ್ತು. ನನ್ನ ಮೇಲಿನ ನಿನ್ನ ಪ್ರೀತಿಯು ಸ್ತ್ರೀಯರ ಪ್ರೀತಿಗಿಂತಲೂ ಅತಿಶಯವಾಗಿತ್ತು.


ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.


ಗಿಲ್ಯಾದಿನ ಬರ್ಜಿಲ್ಲೈಯನು ರೋಗೆಲೀಮಿನಿಂದ ರಾಜನಾದ ದಾವೀದನೊಂದಿಗೆ ಜೋರ್ಡನ್ ನದಿಯ ಬಳಿಗೆ ಬಂದನು. ರಾಜನು ನದಿಯನ್ನು ದಾಟುವಾಗ ರಾಜನೊಂದಿಗಿರಲು ಅವನು ಬಂದನು.


ಆಗ ರಾಜನಾದ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಒಡೆಯನಾದ ಸೌಲನ ಕುಟುಂಬಕ್ಕೆ ಸೇರಿದ ಎಲ್ಲವನ್ನೂ ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.


ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು