Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:35 - ಪರಿಶುದ್ದ ಬೈಬಲ್‌

35 ನನಗೀಗ ಎಂಭತ್ತು ವರ್ಷ. ಒಳಿತು ಕೆಡುಕುಗಳಿಗಿರುವ ವ್ಯತ್ಯಾಸ ಈಗ ನನಗೆ ತಿಳಿಯುವುದಿಲ್ಲ. ನಾನು ತಿನ್ನುವ ಇಲ್ಲವೆ ಕುಡಿಯುವ ವಸ್ತುಗಳ ರುಚಿಯೂ ನನಗೆ ಗೊತ್ತಾಗುವುದಿಲ್ಲ. ಹಾಡುತ್ತಿರುವ ಗಂಡಸರ ಮತ್ತು ಹೆಂಗಸರ ಯಾವುದೇ ಧ್ವನಿಯೂ ನನಗೆ ಕೇಳಿಸುವುದಿಲ್ಲ. ನನ್ನ ಒಡೆಯನಾದ ರಾಜನಿಗೆ ನಾನೇಕೆ ಭಾರವಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು ಕೆಟ್ಟದು ಇವುಗಳ ಭೇದ ನನಗಿನ್ನು ತಿಳಿಯುವುದೇ? ನಿಮ್ಮ ಸೇವಕನಾದ ನನಗೆ ಇನ್ನು ಅನ್ನಪಾನಗಳ ರುಚಿ ಗೊತ್ತಾಗುವುದೇ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೆಯೇ? ನಾನು ನನ್ನ ಒಡೆಯರಾದ ಅರಸರಿಗೆ ಸುಮ್ಮನೆ ಏಕೆ ಹೊರೆಯಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಈಗ ನಾನು ಎಂಭತ್ತು ವರುಷದವನು. ಒಳ್ಳೇದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಸುಮ್ಮನೆ ಯಾಕೆ ಭಾರವಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:35
15 ತಿಳಿವುಗಳ ಹೋಲಿಕೆ  

ದಾವೀದನು ಹೂಷೈಗೆ, “ನೀನು ನನ್ನೊಂದಿಗೆ ಬರುವುದಾದರೆ, ನೀನು ನನಗೆ ಭಾರವಾಗುವಿಯಷ್ಟೇ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.


ನೀವು ಈಗಾಗಲೇ ದೇವರ ಒಳ್ಳೆಯತನವನ್ನು ರುಚಿ ನೋಡಿದ್ದೀರಿ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.


ಆದರೆ ನಾಲಿಗೆಯು ಊಟದ ರುಚಿಯನ್ನು ಆನಂದಿಸುವಂತೆ ಕಿವಿಗಳು ಮಾತುಗಳನ್ನು ವಿವೇಚಿಸುವುದಿಲ್ಲವೇ?


ನಾನು ಸುಳ್ಳು ಹೇಳುತ್ತಿಲ್ಲ. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ನನಗೆ ಗೊತ್ತಿದೆ.


ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು.


ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.


ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು. ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು.


ನೀನು ನನಗೆ ಕೊಡಬೇಕೆಂದಿರುವ ಯಾವ ವಸ್ತುಗಳೂ ನನಗೆ ಬೇಕಿಲ್ಲ. ನಾನು ನಿನ್ನೊಂದಿಗೆ ಜೋರ್ಡನ್ ನದಿಯನ್ನು ದಾಟುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು