37 ಆದರೆ ದಯವಿಟ್ಟು ನನ್ನನ್ನು ಹಿಂದಿರುಗಲು ಬಿಡು. ನಂತರ ನಾನು ನನ್ನ ಸ್ವಂತ ಸ್ಥಳದಲ್ಲಿ ಸಾಯುತ್ತೇನೆ. ನನ್ನ ತಂದೆತಾಯಿಗಳನ್ನು ಸಮಾಧಿ ಮಾಡಿದ ಸ್ಮಶಾನದಲ್ಲಿಯೇ ನನ್ನನ್ನು ಸಮಾಧಿ ಮಾಡಲಿ. ಆದರೆ ನನ್ನ ಒಡೆಯನಾದ ರಾಜನೇ, ಇಲ್ಲಿರುವ ಕಿಮ್ಹಾಮನು ನಿನ್ನ ಸೇವಕನಾಗಿರುತ್ತಾನೆ; ಅವನು ನಿನ್ನೊಂದಿಗೆ ಬರುತ್ತಾನೆ. ನಿನಗೆ ಇಷ್ಟಬಂದಂತೆ ಅವನಿಗೆ ಮಾಡು” ಎಂದು ಹೇಳಿದನು.
37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.
37 ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು.
37 ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರಕೊಂಡುಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ ಎಂದನು.
37 ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.
ಯೋಹಾನಾನನೂ ಉಳಿದ ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿದರು. ಬಾಬಿಲೋನಿನ ರಾಜನು ಗೆದಲ್ಯನನ್ನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು. ಆದರೆ ಇಷ್ಮಾಯೇಲನು ಗೆದಲ್ಯನನ್ನು ಕೊಲೆ ಮಾಡಿದನು. ಇದರಿಂದ ಕಸ್ದೀಯರಿಗೆ ಕೋಪ ಬರಬಹುದೆಂದು ಯೋಹಾನಾನನು ಭಯಪಟ್ಟನು. ಆದ್ದರಿಂದ ಈಜಿಪ್ಟಿಗೆ ಓಡಿಹೋಗಬೇಕೆಂದು ಅವರು ನಿರ್ಧರಿಸಿದರು. ಈಜಿಪ್ಟಿಗೆ ಹೋಗುವ ದಾರಿಯಲ್ಲಿ ಅವರು ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು. ಗೇರುಥ್ ಕಿಮ್ಹಾಮು ಬೆತ್ಲೆಹೇಮ್ ಪಟ್ಟಣದ ಸಮೀಪದಲ್ಲಿದೆ.
“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.
ರಾಜನು ಜೋರ್ಡನ್ ನದಿಯನ್ನು ದಾಟಿ ಗಿಲ್ಗಾಲಿಗೆ ಹೋದನು. ಕಿಮ್ಹಾಮನು ಅವನೊಂದಿಗೆ ಹೋದನು. ಯೆಹೂದ ದೇಶದ ಜನರೆಲ್ಲರು ಮತ್ತು ಇಸ್ರೇಲಿನ ಅರ್ಧದಷ್ಟು ಜನರು ದಾವೀದನನ್ನು ನದಿ ದಾಟಿಸಿ ಕರೆದುಕೊಂಡು ಹೋದರು.
ಈ ಸ್ಥಳದಲ್ಲಿ ನೀನು ಅನ್ನಪಾನಗಳನ್ನು ತೆಗೆದುಕೊಳ್ಳಕೂಡದೆಂದು ಯೆಹೋವನು ನಿನಗೆ ಆಜ್ಞಾಪಿಸಿದ್ದನು. ಆದರೆ ನೀನು ಹಿಂದಿರುಗಿಬಂದು ಅನ್ನಪಾನಗಳನ್ನು ತೆಗೆದುಕೊಂಡೆ. ಆದ್ದರಿಂದ ನಿನ್ನ ವಂಶದ ಸ್ಮಶಾನದಲ್ಲಿ ನಿನ್ನ ದೇಹವನ್ನು ಸಮಾಧಿಮಾಡಲಾಗುವುದಿಲ್ಲ ಎಂದು ಯೆಹೋವನು ಹೇಳುತ್ತಾನೆ” ಎಂದನು.
“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.
ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.
ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.
ರಾಜನು, “ಕಿಮ್ಹಾಮನು ನನ್ನೊಂದಿಗೆ ಬರಲಿ. ನಾನು ನಿನಗೋಸ್ಕರ ಅವನಿಗೆ ದಯೆತೋರಿಸುವೆನು. ಅವನಿಗಾಗಿ ನೀನು ಏನು ಮಾಡಬೇಕೆಂದು ಬಯಸುತ್ತೀಯೋ ಅದನ್ನೆಲ್ಲಾ ಮಾಡುತ್ತೇನೆ” ಎಂದು ಉತ್ತರಿಸಿದನು.