ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.
ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.