2 ಸಮುಯೇಲ 19:43 - ಪರಿಶುದ್ದ ಬೈಬಲ್43 ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಇಸ್ರಾಯೇಲರು ಯೆಹೂದ್ಯರಿಗೆ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟಲ್ಲಾ, ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ಕಡೆಗಾಣಿಸಿದ್ದೇಕೆ? ನಮ್ಮ ಅರಸನನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ?” ಎಂದರು. ಇಸ್ರಾಯೇಲರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.
ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.