2 ಸಮುಯೇಲ 19:8 - ಪರಿಶುದ್ದ ಬೈಬಲ್8 ಆಗ ರಾಜನು ನಗರದ ಬಾಗಿಲಿಗೆ ಹೋದನು. ರಾಜನು ಬಾಗಿಲಿನ ಬಳಿಯಲ್ಲಿದ್ದಾನೆಂಬ ಸುದ್ದಿಯು ಹರಡಿತು. ಆದ್ದರಿಂದ ಜನರೆಲ್ಲರೂ ರಾಜನನ್ನು ನೋಡಲು ಬಂದರು. ಅಬ್ಷಾಲೋಮನ ಹಿಂಬಾಲಕರಾದ ಇಸ್ರೇಲರೆಲ್ಲ ಮನೆಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಅರಸನು ಎದ್ದು ಬಂದು ಊರುಬಾಗಿಲಲ್ಲಿ ಕುಳಿತುಕೊಂಡನು. “ಇಗೋ, ಅರಸರು ಊರುಬಾಗಿಲಲ್ಲಿ ಕುಳಿತುಕೊಂಡಿದ್ದಾರೆ,” ಎಂಬ ಸುದ್ದಿ ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಬಂದು ಅವನ ಸುತ್ತಲೂ ನೆರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಅರಸನು ಎದ್ದು ಬಂದು ಊರುಬಾಗಲಲ್ಲಿ ಕೂತುಕೊಂಡನು. ಇಗೋ, ಅರಸನು ಬಂದು ಊರುಬಾಗಲಲ್ಲಿ ಕೂತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.