Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:1 - ಪರಿಶುದ್ದ ಬೈಬಲ್‌

1 ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:1
26 ತಿಳಿವುಗಳ ಹೋಲಿಕೆ  

ಮತ್ತು ಹೆಬ್ರೋನಿನವರಿಗೆ ಕಳುಹಿಸಿಕೊಟ್ಟನು ಮತ್ತು ತನ್ನ ಜನರು ಹೋಗಿದ್ದ ಇತರ ಸ್ಥಳಗಳ ನಾಯಕರಿಗೂ ಆ ವಸ್ತುಗಳಲ್ಲಿ ಕೆಲವನ್ನು ಕಳುಹಿಸಿದನು.


ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು.


ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ “ಮಹನಯಿಮ್” ಎಂದು ಹೆಸರಿಟ್ಟನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!


ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.


ದೇವಾಲಯಕ್ಕಾಗಿ ಅವರು ಒಟ್ಟು ನೂರತೊಂಭತ್ತು ಟನ್ ತೂಕದ ಬಂಗಾರ, ಮುನ್ನೂರ ಎಪ್ಪತ್ತೈದು ಟನ್ ತೂಕದ ಬೆಳ್ಳಿ, ಆರನೂರ ಎಪ್ಪತ್ತೈದು ಟನ್ ತೂಕದ ತಾಮ್ರ ಮತ್ತು ಮೂರು ಸಾವಿರದ ಏಳುನೂರೈವತ್ತು ಟನ್ ತೂಕದ ಕಬ್ಬಿಣವನ್ನು ಕೊಟ್ಟರು.


ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.


ನಾಲ್ಕು ವರ್ಷಗಳ ಬಳಿಕ ಅಬ್ಷಾಲೋಮನು ರಾಜನಾದ ದಾವೀದನಿಗೆ, “ನಾನು ಹೆಬ್ರೋನಿನಲ್ಲಿ ಯೆಹೋವನೊಂದಿಗೆ ಮಾಡಿದ ವಿಶೇಷ ಪ್ರಮಾಣವನ್ನು ಪೂರ್ಣಗೊಳಿಸುವುದಕ್ಕೆ ದಯವಿಟ್ಟು ಅನುಮತಿಕೊಡು.


ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.


ದಾವೀದನು ಯೆಹೋವನಿಗೆ, “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)


ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.


ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು