Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:12 - ಪರಿಶುದ್ದ ಬೈಬಲ್‌

12 ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ದಿನ ನೇರನ ಮಗ ಅಬ್ನೇರನು ಮತ್ತು ಸೌಲನ ಮಗ ಈಷ್ಬೋಶೆತನ ಸೇವಕರು ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ದಿವಸ ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿವಿುನಿಂದ ಹೊರಟು ಗಿಬ್ಯೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:12
9 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


“ನನ್ನೊಂದಿಗೆ ಬಂದು ಗಿಬ್ಯೋನಿನ ಮೇಲೆ ಧಾಳಿಮಾಡಲು ಸಹಾಯಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು.


ಆದ್ದರಿಂದ ಅದೋನೀಚೆದೆಕನು ಮತ್ತು ಅವನ ಜನರು ಬಹಳ ಹೆದರಿಕೊಂಡರು. ಗಿಬ್ಯೋನ್ “ಆಯಿ”ಯಂತೆ ಸಣ್ಣ ಊರಾಗಿರಲಿಲ್ಲ. ಗಿಬ್ಯೋನ್ ಬಹಳ ದೊಡ್ಡ ನಗರವಾಗಿತ್ತು. ಅದು ರಾಜಧಾನಿಯಷ್ಟು ದೊಡ್ಡ ಪಟ್ಟಣವಾಗಿತ್ತು. ಆ ಪಟ್ಟಣದ ಜನರೆಲ್ಲರೂ ಒಳ್ಳೆಯ ಯೋಧರಾಗಿದ್ದರು. ಆದ್ದರಿಂದ ಆ ಅರಸನು ಭಯಗೊಂಡಿದ್ದನು.


ಯೆಹೋಶುವನು “ಜೆರಿಕೊ” ಮತ್ತು “ಆಯಿ” ನಗರಗಳನ್ನು ಸ್ವಾಧೀನಪಡಿಸಿಕೊಂಡ ಬಗೆಯನ್ನು ಗಿಬ್ಯೋನ್ ನಗರದ ಜನರು ಕೇಳಿದ್ದರು.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ “ಮಹನಯಿಮ್” ಎಂದು ಹೆಸರಿಟ್ಟನು.


ಅವನು ನನ್ನನ್ನು ಕೊಂದುಬಿಟ್ಟರೆ, ನಾವು ಅಂದರೆ ಫಿಲಿಷ್ಟಿಯರೆಲ್ಲ ನಿಮ್ಮ ಗುಲಾಮರಾಗುತ್ತೇವೆ. ಆದರೆ ನಾನು ಅವನನ್ನು ಸೋಲಿಸಿ ಕೊಂದುಬಿಟ್ಟರೆ, ನೀವೆಲ್ಲ ನಮಗೆ ಗುಲಾಮರಾಗಿದ್ದು ನಮ್ಮ ಸೇವೆಯನ್ನು ಮಾಡಬೇಕು” ಎಂದು ಆರ್ಭಟಿಸಿದನು.


ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು