2 ಸಮುಯೇಲ 2:13 - ಪರಿಶುದ್ದ ಬೈಬಲ್13 ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ ಇವರು ಕೆರೆಯ ಈಚೆಯಲ್ಲಿಯೂ ಅವರು ಆಚೆಯಲ್ಲಿಯೂ ಕೂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು. ಅಧ್ಯಾಯವನ್ನು ನೋಡಿ |
ಯೋವಾಬನು ತನ್ನ ಸೈನ್ಯದೊಂದಿಗೆ ಗಿಬ್ಯೋನಿನಲ್ಲಿದ್ದ “ದೊಡ್ಡ ಕಲ್ಲಿನ” ಬಳಿಗೆ ಬಂದಾಗ, ಅಮಾಸನು ಅವರನ್ನು ಸಂಧಿಸಲು ಬಂದನು. ಯೋವಾಬನು ತನ್ನ ಸಮವಸ್ತ್ರಗಳನ್ನು ಧರಿಸಿದ್ದನು. ಸೊಂಟಪಟ್ಟಿಯನ್ನು ಕಟ್ಟಿಕೊಂಡಿದ್ದನು. ಅವನ ಖಡ್ಗವು ಒರೆಯಲ್ಲಿತ್ತು. ಅವನು ಅಮಾಸನನ್ನು ಸಂಧಿಸಲು ಮುಂದೆ ಸಾಗಿದಾಗ, ಅವನ ಖಡ್ಗವು ಒರೆಯಿಂದ ಹೊರಗೆ ಬಿದ್ದಿತು. ಯೋವಾಬನು ಖಡ್ಗವನ್ನು ಎತ್ತಿಕೊಂಡು ಅದನ್ನು ತನ್ನ ಕೈಗಳಲ್ಲಿ ಹಿಡಿದುಕೊಂಡನು.
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.