Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:14 - ಪರಿಶುದ್ದ ಬೈಬಲ್‌

14 ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:14
10 ತಿಳಿವುಗಳ ಹೋಲಿಕೆ  

ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.


ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ರಂಧ್ರಕ್ಕೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.


ಅವಿವೇಕಿಯು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸುತ್ತಾನೆ. ವಿವೇಕಿಯು ಜ್ಞಾನದಲ್ಲಿ ಸಂತೋಷಿಸುತ್ತಾನೆ.


ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.


ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.


ಇಸ್ರೇಲರ ರಾಜನೂ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನ ಬಳಿಗೆ ಅಮಚ್ಯನು ಸಂದೇಶಕರನ್ನು ಕಳುಹಿಸಿದನು. ಅಮಚ್ಯನು ಸಂದೇಶದಲ್ಲಿ, “ಬಾ, ನಾವು ಪರಸ್ಪರ ಯುದ್ಧ ಮಾಡೋಣ!” ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು