Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:15 - ಪರಿಶುದ್ದ ಬೈಬಲ್‌

15 ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸೌಲನ ಮಗ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ಮತ್ತು ದಾವೀದನ ಸೇವಕರಲ್ಲಿ ಹನ್ನೆರಡು ಮಂದಿ ಸಮಸಂಖ್ಯೆಯಾಗಿ ಹೊರಟು ದ್ವಂದ್ವಯುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟುಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:15
3 ತಿಳಿವುಗಳ ಹೋಲಿಕೆ  

ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.


ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.


ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು