2 ಸಮುಯೇಲ 2:18 - ಪರಿಶುದ್ದ ಬೈಬಲ್18 ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. ಅಧ್ಯಾಯವನ್ನು ನೋಡಿ |
“ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿದ್ದನ್ನು ಸಹ ನೀನು ಜ್ಞಾಪಿಸಿಕೊ. ಇಸ್ರೇಲಿನ ಇಬ್ಬರು ಸೇನಾಧಿಪತಿಗಳನ್ನು ಅವನು ಕೊಂದುಹಾಕಿದನು. ಅವರು ಯಾರೆಂದರೆ: ನೇರನ ಮಗನಾದ ಅಬ್ನೇರನು ಮತ್ತು ಯೆತೆರನ ಮಗನಾದ ಅಮಾಸನು. ಈ ಜನರ ರಕ್ತವು ಅವನ ಸೊಂಟಪಟ್ಟಿಯ ಕತ್ತಿ ಹಾಗೂ ಯುದ್ಧಕಾಲದಲ್ಲಿ ತೊಡುವ ಪಾದರಕ್ಷೆಗಳ ಮೇಲೆ ಚಿಮ್ಮಿತು. ಶಾಂತಿಯ ಕಾಲದಲ್ಲಿ ಅವನು ಅವರನ್ನು ಕೊಂದುಹಾಕಿದನು. ಆದ್ದರಿಂದ ನಾನು ಅವನನ್ನು ದಂಡಿಸಬೇಕಾಗಿತ್ತು.