Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:21 - ಪರಿಶುದ್ದ ಬೈಬಲ್‌

21 ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಅಬ್ನೇರನು, “ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು, ಸುಲಿದುಕೋ,” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಅಬ್ನೇರನು ಅವನಿಗೆ - ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಪ್ರಾಯಸ್ಥರಲ್ಲೊಬ್ಬನನ್ನು ಹಿಡಿದು ಸುಲುಕೋ ಎಂದು ಹೇಳಿದನು; ಆದರೆ ಅಸಾಹೇಲನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:21
3 ತಿಳಿವುಗಳ ಹೋಲಿಕೆ  

ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು.


ಅಬ್ನೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು. “ಹೌದು” ಎಂದು ಅಸಾಹೇಲನು ಹೇಳಿದನು.


ಅಬ್ನೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು