2 ಸಮುಯೇಲ 2:23 - ಪರಿಶುದ್ದ ಬೈಬಲ್23 ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಸಾಹೇಲನು ಬಿಟ್ಟು ಹೋಗುವುದಕ್ಕೆ ಒಪ್ಪದ ಕಾರಣ ಅಬ್ನೇರನು ಬರ್ಜಿಯನ್ನು ಹಿಂದಿನಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಹೊರಗೆ ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತು ಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೂ ಅಸಾಹೇಲನು ಬಿಟ್ಟುಹೋಗುವುದಕ್ಕೆ ಒಪ್ಪಲಿಲ್ಲ. ಆದಕಾರಣ ಅಬ್ನೇರನು ಭರ್ಜಿಯನ್ನು ಹಿಮ್ಮುಖವಾಗಿ ಎಸೆದು ಅವನ ಹೊಟ್ಟೆಯನ್ನು ತಿವಿದನು. ಆ ಭರ್ಜಿ ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅಸಾಹೇಲನು ಬಿಟ್ಟುಹೋಗುವದಕ್ಕೆ ಒಪ್ಪದ್ದರಿಂದ ಅಬ್ನೇರನು ಬರ್ಜಿಯನ್ನು ಹಿಂಗಡೆಯಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೆ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು. ಅಧ್ಯಾಯವನ್ನು ನೋಡಿ |