24 ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು “ಅಮ್ಮಾ” ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ “ಅಮ್ಮಾ” ಬೆಟ್ಟ.)
24 ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
24 ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ‘ಅಮ್ಮಾ’ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮವಾಯಿತು. ಆ ಗುಡ್ಡ ಗಿಬ್ಯೋನ್ ಮರುಭೂಮಿ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿದೆ.
24 ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ಅಮ್ಮಾ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.
ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.