2 ಸಮುಯೇಲ 2:27 - ಪರಿಶುದ್ದ ಬೈಬಲ್27 ಆಗ ಯೋವಾಬನು, “ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳದೆ ಇದ್ದಿದ್ದರೆ, ಯೆಹೋವನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ, ಜನರು ನಾಳೆ ಬೆಳಗಾಗುವವರೆಗೆ ತಮ್ಮ ದೇಶಬಾಂಧವರನ್ನು ಹಿಂದಟ್ಟದೆ ಬಿಡುತ್ತಿರಲಿಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದಕ್ಕೆ ಯೋವಾಬನು - ದೇವರ ಜೀವದಾಣೆ ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುತ್ತಿದ್ದಿಲ್ಲ ಎಂದು ಉತ್ತರಕೊಟ್ಟು ಕೂಡಲೆ ತುತೂರಿಯನ್ನು ಊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು. ಅಧ್ಯಾಯವನ್ನು ನೋಡಿ |