2 ಸಮುಯೇಲ 2:28 - ಪರಿಶುದ್ದ ಬೈಬಲ್28 ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಜನರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟದರಿಂದ ಯುದ್ಧವು ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು. ಅಧ್ಯಾಯವನ್ನು ನೋಡಿ |
ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.