2 ಸಮುಯೇಲ 2:30 - ಪರಿಶುದ್ದ ಬೈಬಲ್30 ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೋವಾಬನು ಅಬ್ನೇರನನ್ನು ಬೆನ್ನಟ್ಟದೆ ಹಿಂದೆ ತಿರುಗಿ ಬಂದು, ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಯೋಧರು ಮತ್ತು ಅಸಾಹೇಲನು ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು ಹಿಂದಿರುಗಿ ಬಂದು ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಭತ್ತು ಮಂದಿ ಭಟರೂ ಅಸಾಹೇಲನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ, ದಾವೀದನ ಸೇವಕರಲ್ಲಿ ಹತ್ತೊಂಬತ್ತು ಜನರೂ, ಅಸಾಯೇಲನೂ ಕಡಿಮೆಯಾಗಿದ್ದರು. ಅಧ್ಯಾಯವನ್ನು ನೋಡಿ |