2 ಸಮುಯೇಲ 2:7 - ಪರಿಶುದ್ದ ಬೈಬಲ್7 ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ಆದುದರಿಂದ ಸೌಲನು ಸತ್ತುಹೋಗಿದ್ದರೂ ನೀವು ಶೂರರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿರುವದರಿಂದ ಸೌಲನು ಸತ್ತು ಹೋದರೂ ಶೂರರಾಗಿರ್ರಿ, ನಿಮ್ಮ ಕೈಗಳು ಜೋಲು ಬೀಳದಿರಲಿ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.