Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:9 - ಪರಿಶುದ್ದ ಬೈಬಲ್‌

9 ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:9
19 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ. ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ. ಯೆಹೂದವು ನನ್ನ ರಾಜದಂಡವಾಗಿರುತ್ತದೆ.


ಆಶೇರ್ಯರು ತಮ್ಮ ಪ್ರದೇಶವನ್ನು ಬಿಡುವಂತೆ ಕಾನಾನ್ಯರನ್ನು ಒತ್ತಾಯಿಸಲಿಲ್ಲ. ಹೀಗಾಗಿ ಕಾನಾನ್ಯರು ಆಶೇರ್ಯರೊಡನೆ ಇರತೊಡಗಿದರು.


ಈ ಭೂಮಿಯನ್ನು ಆ ಕುಲದವರಿಗೆ ಕೊಡಲಾಯಿತು: ಇಜ್ರೇಲ್, ಕೆಸುಲ್ಲೋತ್, ಶೂನೇಮ್,


ಆಶೇರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಈಗ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಆಶೇರ್ ಎಂದು ಹೆಸರಿಟ್ಟಳು.


ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.


ಫಿಲಿಷ್ಟಿಯರ ಸೈನಿಕರೆಲ್ಲಾ ಅಫೇಕಿನಲ್ಲಿ ಒಟ್ಟುಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚಿಲುಮೆಯ ಹತ್ತಿರ ಪಾಳೆಯಮಾಡಿಕೊಂಡರು.


ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು.


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧವು ನಡೆಯುತ್ತಿದ್ದಾಗ ಸೌಲನ ಸೈನ್ಯದಲ್ಲಿ ಅಬ್ನೇರನೇ ಬಲಶಾಲಿಯಾದನು.


ಬೆನ್ಯಾಮೀನ್ ಕುಲದಿಂದ ಮೂರು ಸಾವಿರ ಮಂದಿ ಇದ್ದರು. ಇವರೆಲ್ಲಾ ಸೌಲನ ಸಂಬಂಧಿಕರು. ಇವರಲ್ಲಿ ಬಹು ಮಂದಿ ಸೌಲನು ಜೀವಿಸಿರುವಾಗ ಅವನೊಂದಿಗಿದ್ದರು.


ಎಫ್ರಾಯೀಮ್ ಕುಲದವರಿಗೆ ಕೊಟ್ಟ ಸ್ವಾಸ್ತ್ಯವು ಇಂತಿದೆ: ಅವರ ಸ್ವಾಸ್ತ್ಯದ ಪೂರ್ವದಿಕ್ಕಿನ ಸೀಮೆಯು ಮೇಲಿನ ಬೇತ್‌ಹೋರೋನಿನ ಹತ್ತಿರ ಇದ್ದ ಅಟಾರೋತದ್ದಾರಿನಿಂದ ಆರಂಭವಾಗುತ್ತದೆ.


ಆ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಈ ಪ್ರದೇಶವನ್ನು ಎಫ್ರಾಯೀಮ್ ಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಡಲಾಗಿತ್ತು.


ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು.


ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.


ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.


ಜೋರ್ಡನ್ ನದಿಯು ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಲಿನ ಮೇರೆಯು ಇದೇ.


ಎಫ್ರಾಯೀಮ್ ಕುಲದಿಂದ ಇಪ್ಪತ್ತು ಸಾವಿರದ ಎಂಟನೂರು ಮಂದಿ ಇದ್ದರು. ಇವರೆಲ್ಲರೂ ಧೈರ್ಯಶಾಲಿ ಸೈನಿಕರು ಮತ್ತು ತಮ್ಮ ಕುಲದವರಿಗೆ ನಾಯಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು