14 ಬಿಕ್ರೀಯ ಮಗನಾದ ಶೆಬನು ಇಸ್ರೇಲಿನ ಎಲ್ಲಾ ಕುಲಗಳ ಮೂಲಕ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಹೋದನು. ಬೇರಿಯ ಕುಲದವರೆಲ್ಲರೂ ಒಟ್ಟಿಗೆ ಸೇರಿಕೊಂಡು ಶೆಬನನ್ನು ಹಿಂಬಾಲಿಸಿದರು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.
ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.
ಯೋವಾಬನು ತನ್ನ ಜನರೊಂದಿಗೆ ಆಬೇಲ್ಬೇತ್ಮಾಕಾ ಊರಿಗೆ ಬಂದನು. ಯೋವಾಬನ ಸೈನ್ಯವು ಪಟ್ಟಣವನ್ನು ಸುತ್ತುಗಟ್ಟಿತು. ಅವರು ನಗರದ ಗೋಡೆಯ ಹತ್ತಿರ ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಸಮೀಪಿಸಿದರು; ನಂತರ ಆ ಗೋಡೆಯನ್ನು ಬೀಳಿಸುವುದಕ್ಕಾಗಿ ಅದನ್ನು ಹೊಡೆಯಲಾಂಭಿಸಿದರು.