2 ಸಮುಯೇಲ 20:15 - ಪರಿಶುದ್ದ ಬೈಬಲ್15 ಯೋವಾಬನು ತನ್ನ ಜನರೊಂದಿಗೆ ಆಬೇಲ್ಬೇತ್ಮಾಕಾ ಊರಿಗೆ ಬಂದನು. ಯೋವಾಬನ ಸೈನ್ಯವು ಪಟ್ಟಣವನ್ನು ಸುತ್ತುಗಟ್ಟಿತು. ಅವರು ನಗರದ ಗೋಡೆಯ ಹತ್ತಿರ ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಸಮೀಪಿಸಿದರು; ನಂತರ ಆ ಗೋಡೆಯನ್ನು ಬೀಳಿಸುವುದಕ್ಕಾಗಿ ಅದನ್ನು ಹೊಡೆಯಲಾಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೋವಾಬನ ಕಡೆಯವರು ಅಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿದರು. ಅದರ ಹೊರಗೋಡೆಯ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯ ಕೆಳಗೆ ಅಗೆಯುತ್ತಾ ಅದನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೋವಾಬನ ಕಡೆಯವರು ಆಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ಊರುಗೋಡೆಗೆ ತಗಲುವ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಕೆಡವಿಬಿಡುವದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೋವಾಬನ ಜೊತೆಗಿದ್ದ ಸೈನಿಕರು ಬಂದು ಆಬೇಲ್ ಬೇತ್ ಮಾಕಾ ಊರಿಗೆ ಮುತ್ತಿಗೆ ಹಾಕಿ, ಪಟ್ಟಣಕ್ಕೆದುರಾಗಿ ಊರು ಗೋಡೆಯವರೆಗೆ ಮಣ್ಣಿನ ದಿಬ್ಬವನ್ನು ಮಾಡಿದರು. ಯೋವಾಬನ ಸಂಗಡದಲ್ಲಿರುವ ಜನರೆಲ್ಲರೂ ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿ |
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.