16 ಆ ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು.
16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ,
ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.
ಯೋವಾಬನು ಆ ಸ್ತ್ರೀಯೊಂದಿಗೆ ಮಾತಾಡಲು ಹತ್ತಿರಕ್ಕೆ ಬಂದನು. ಅವಳು, “ನೀನು ಯೋವಾಬನೇ?” ಎಂದು ಕೇಳಿದಳು. “ಹೌದು, ನಾನೇ ಯೋವಾಬನು” ಎಂದು ಅವನು ಉತ್ತರಿಸಿದನು. ಆಗ ಅವಳು ಯೋವಾಬಿಗೆ, “ನಾನು ಹೇಳುವುದನ್ನು ಕೇಳು” ಎಂದಳು. “ಆಗಲಿ, ಕೇಳುತ್ತೇನೆ” ಎಂದು ಯೋವಾಬನು ಉತ್ತರಿಸಿದನು.
ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.
ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.