Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:19 - ಪರಿಶುದ್ದ ಬೈಬಲ್‌

19 ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:19
29 ತಿಳಿವುಗಳ ಹೋಲಿಕೆ  

ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.


ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ.


ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು.


ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು.


ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: “ಮರಣವು ಜಯದಲ್ಲಿ ನುಂಗಿಯೇಹೋಯಿತು.”


ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.


ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.


ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.


ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು.


“ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.


ಭೂಮಿಯೇ ಬಾಯಿತೆರೆದು ಅವರನ್ನು ನುಂಗಿಬಿಟ್ಟಿತೊ ಎಂಬಂತೆ, ಅವರ ಕುಟುಂಬಗಳವರನ್ನು ಕೋರಹನ ಎಲ್ಲಾ ಹಿಂಬಾಲಕರನ್ನು ಮತ್ತು ಅವರ ಆಸ್ತಿಯೆಲ್ಲವನ್ನು ನುಂಗಿಬಿಟ್ಟಿತು.


ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ?


“ನೀವು ಒಂದು ಪಟ್ಟಣವನ್ನು ಆಕ್ರಮಿಸಲು ಹೋದಾಗ, ಅಲ್ಲಿಯ ಜನರಿಗೆ ‘ಶಾಂತಿಸಂಧಾನಕ್ಕೆ’ ಕರೆಯನ್ನು ಕೊಡಬೇಕು.


ರಾಜನು ನನ್ನನ್ನೂ ನನ್ನ ಮಗನನ್ನೂ ಕೊಲ್ಲಲು ಇಚ್ಛಿಸುವ ವ್ಯಕ್ತಿಯಿಂದ ನಮ್ಮಿಬ್ಬರನ್ನೂ ರಕ್ಷಿಸಬಹುದು; ದೇವರು ನಮಗೆ ಕೊಟ್ಟಿರುವ ಸ್ವಾಸ್ತ್ಯವನ್ನು ನಮ್ಮಿಂದ ಕಸಿದುಕೊಳ್ಳದಂತೆ ಕಾಪಾಡಬಹುದು.’


ಆಗ ಅವಳು, “ಪೂರ್ವಕಾಲದಲ್ಲಿ ಜನರು, ‘ಅಗತ್ಯವಿದ್ದಾಗ ಆಬೇಲಿನವರ ಸಲಹೆಯನ್ನು ಕೇಳಿ, ಆಗ ನಿಮಗೆ ಸೂಕ್ತ ಸಲಹೆ ದೊರಕುತ್ತದೆ’ ಎಂದು ಹೇಳುತ್ತಿದ್ದರು.


ಅದಕ್ಕೆ ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ.


ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:


ಭೂಲೋಕದ ಎಲ್ಲಾ ಜನರೊಳಗಿಂದ ಅವರನ್ನು ನೀನು ನಿನ್ನ ವಿಶೇಷವಾದ ಸ್ವಂತ ಜನರೆಂದು ಆರಿಸಿರುವೆ. ಯೆಹೋವನೇ, ನಮ್ಮ ಪೂರ್ವಿಕರನ್ನು ನೀನು ಈಜಿಪ್ಟಿನಿಂದ ಬರಮಾಡಿದಾಗ ನಿನ್ನ ಸೇವಕನಾದ ಮೋಶೆಯ ಮೂಲಕ ಅದನ್ನು ವಾಗ್ದಾನ ಮಾಡಿದೆ.”


ಯಾರಿಗೆ ಯೆಹೋವನು ದೇವರಾಗಿದ್ದಾನೋ ಅವರೇ ಧನ್ಯರು. ಯಾಕೆಂದರೆ ಆತನು ಅವರನ್ನು ಸ್ವಕೀಯರನ್ನಾಗಿ ಆರಿಸಿಕೊಂಡಿದ್ದಾನೆ.


ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.


ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು