2 ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.
2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.
2 ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು.
2 ಆಗ ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್‍ತಗ್ಗಿನಿಂದ ಯೆರೂಸಲೇವಿುನವರೆಗೂ ಅವನ ಜೊತೆಯಲ್ಲಿ ಹೋದರು.
2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.
ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.
ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.
ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.
ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.
ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.