2 ಸಮುಯೇಲ 20:20 - ಪರಿಶುದ್ದ ಬೈಬಲ್20 ಅದಕ್ಕೆ ಯೋವಾಬನು, “ಇಲ್ಲ, ಇಲ್ಲ! ನಾನು ಏನನ್ನೂ ನಾಶಪಡಿಸಲು ಇಚ್ಛಿಸಿಲ್ಲ. ನಿಮ್ಮ ಪಟ್ಟಣವನ್ನು ನಾಶಪಡಿಸಲು ನಾನು ಬಂದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಯೋವಾಬನು, “ಕಬಳಿಸುವುದಾಗಲಿ, ಹಾಳುಮಾಡುವುದಾಗಲಿ ನನ್ನಿಂದ ದೂರವಿರಲಿ; ಅಂಥದು ಬೇಡವೇ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದಕ್ಕೆ ಯೋವಾಬನು - ನುಂಗಿಬಿಡುವದಾಗಲಿ ಹಾಳುಮಾಡುವದಾಗಲಿ ನನಗೆ ದೂರವಾಗಿರಲಿ; ಅಂಥದು ಬೇಡವೇ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.