2 ಸಮುಯೇಲ 20:23 - ಪರಿಶುದ್ದ ಬೈಬಲ್23 ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿ |
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.