Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:3 - ಪರಿಶುದ್ದ ಬೈಬಲ್‌

3 ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನಾದ ದಾವೀದನು ಜೆರುಸಲೇಮಿಗೆ ಬಂದ ಮೇಲೆ ತಾನು ಮನೆಕಾಯುವುದಕ್ಕಾಗಿ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಅವರು ಜೀವದಿಂದ ಇರುವವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನಾದ ದಾವೀದನು ಯೆರೂಸಲೇವಿುಗೆ ಬಂದ ಮೇಲೆ ತಾನು ಮನೆಕಾಯುವದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರಕೊಡುತ್ತಿದ್ದನು; ಆದರೆ ಅವರನ್ನು ತಿರಿಗಿ ಕೂಡಲಿಲ್ಲ. ಅವರು ಜೀವದಿಂದಿರುವವರೆಗೂ ವಿಧವೆಯರಂತಿದ್ದು ಕಾವಲಲ್ಲಿರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:3
4 ತಿಳಿವುಗಳ ಹೋಲಿಕೆ  

ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,


ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.


ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು