2 ಸಮುಯೇಲ 20:5 - ಪರಿಶುದ್ದ ಬೈಬಲ್5 ಆಗ ಅಮಾಸನು ಯೆಹೂದದ ಜನರನ್ನು ಒಟ್ಟಾಗಿ ಕರೆಯಲು ಹೋದನು; ಆದರೆ ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ ಅರಸನು ಅಬೀಷೈಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು. ಅಧ್ಯಾಯವನ್ನು ನೋಡಿ |
ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.