Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:6 - ಪರಿಶುದ್ದ ಬೈಬಲ್‌

6 ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:6
17 ತಿಳಿವುಗಳ ಹೋಲಿಕೆ  

ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.


ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.


ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.


ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.


ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.


ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪ್ರೋತ್ಸಾಹಿಸು. ಯೆಹೋವನಾಣೆ, ಈ ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನ್ನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳಲ್ಲೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು.


ಆ ಮನುಷ್ಯನು ಯೋವಾಬನಿಗೆ, “ನೀನು ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. ‘ಎಚ್ಚರದಿಂದಿರಿ, ಯುವಕನಾದ ಅಬ್ಷಾಲೋಮನಿಗೆ ಕೇಡುಮಾಡದಿರಿ’ ಎಂದು ರಾಜನು ಹೇಳಿದ್ದಾನೆ.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ಅಸಾಹೇಲನನ್ನು ಗಿಬ್ಯೋನ್ ಯುದ್ಧದಲ್ಲಿ ಅಬ್ನೇರನು ಕೊಂದುಹಾಕಿದನು. ಆದ್ದರಿಂದ ಅಸಾಹೇಲನ ಸಹೋದರರಾದ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದರು.


ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.


ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು