12 ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವದಕ್ಕೋಸ್ಕರ ಯಾಬೇಷ್‍ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ಷೆಯಾನಿನ ಬೀದಿಗಳಲ್ಲಿ ತೂಗಹಾಕಿದ್ದರು. ಯಾಬೇಷ್‍ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
12 ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
ಅದಕ್ಕೆ ಆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.
ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.
ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.