Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:14 - ಪರಿಶುದ್ದ ಬೈಬಲ್‌

14 ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:14
16 ತಿಳಿವುಗಳ ಹೋಲಿಕೆ  

ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.


ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು.


ಆ ಜನರು ಯೋನನನ್ನು ಸಮುದ್ರದೊಳಗೆ ಬಿಸಾಡಿಬಿಟ್ಟರು. ಆಗ ಬಿರುಗಾಳಿಯು ನಿಂತಿತು. ಸಮುದ್ರವು ಶಾಂತವಾಯಿತು.


ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.


ಈ ದಿನ ನನ್ನನ್ನು ಬಿಟ್ಟು ನೀನು ಮುಂದೆ ಸಾಗಿದಾಗ, ಬೆನ್ಯಾಮೀನನ ಮೇರೆಯಲ್ಲಿರುವ ಚೆಲ್ಚಹಿನಲ್ಲಿನ ರಾಹೇಲಳ ಸಮಾಧಿಯ ಬಳಿ ಇಬ್ಬರು ಮನುಷ್ಯರನ್ನು ಸಂಧಿಸುವೆ. ಅವರಿಬ್ಬರೂ ನಿನಗೆ, ‘ನೀನು ಹುಡುಕುತ್ತಿದ್ದ ಕತ್ತೆಗಳು ಒಬ್ಬನಿಗೆ ಸಿಕ್ಕಿವೆ. ನಿನ್ನ ತಂದೆಯು ಕತ್ತೆಗಳ ಬಗ್ಗೆ ಚಿಂತಿಸುವುದನ್ನು ಬಿಟ್ಟು ನಿನ್ನ ಬಗ್ಗೆ ಚಿಂತಿಸುತ್ತಿದ್ದಾನೆ. ನನ್ನ ಮಗನು ಎಲ್ಲಿಗೆ ಹೋದನೋ ಎಂದು ಹಂಬಲಿಸುತ್ತಿದ್ದಾನೆ’ ಎಂದು ಹೇಳುವರು” ಎಂದನು.


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ದಾವೀದನು ಯಾಬೇಷ್‌ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನೂ ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನೂ ಜನರು ಒಟ್ಟಾಗಿ ಸೇರಿಸಿದರು.


ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು