Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:16 - ಪರಿಶುದ್ದ ಬೈಬಲ್‌

16 ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವದಕ್ಕಿದ್ದನು. ಅವನ ಬರ್ಜಿಯ ತಾಮ್ರವು ಮುನ್ನೂರು ರೂಪಾಯಿ ತೂಕದ್ದು; ಅವನು ಸೊಂಟಕ್ಕೆ ಹೊಸ [ಕತ್ತಿಯನ್ನು] ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:16
20 ತಿಳಿವುಗಳ ಹೋಲಿಕೆ  

ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.


ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.


ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.


ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.


ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು.


(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಜಮ್‌ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್‌ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.


(ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್‌ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು.


ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು.


ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.


ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಆ ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.


ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು.


ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.


ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯ ಗಾತ್ರದಷ್ಟಿತ್ತು. ಆ ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್‌ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು