2 ಸಮುಯೇಲ 21:17 - ಪರಿಶುದ್ದ ಬೈಬಲ್17 ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು. ಅಧ್ಯಾಯವನ್ನು ನೋಡಿ |
ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.
ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಫದಲ್ಲಿ ಗೆದಲ್ಯನೊಂದಿಗೆ ರಹಸ್ಯವಾಗಿ ಮಾತನಾಡಿದನು. ಯೋಹಾನಾನನು ಗೆದಲ್ಯನಿಗೆ ಹೀಗೆ ಹೇಳಿದನು: “ನಾನು ಹೋಗಿ ನೆತನ್ಯನ ಮಗನಾದ ಇಷ್ಮಾಯೇಲನ ಕೊಲೆ ಮಾಡುವೆನು. ಯಾರಿಗೂ ಆ ವಿಷಯ ತಿಳಿಯುವುದಿಲ್ಲ. ನಾವು ಇಷ್ಮಾಯೇಲನಿಗೆ ನಿನ್ನನ್ನು ಕೊಲ್ಲುವ ಅವಕಾಶ ಕೊಡಬಾರದು. ಅದರಿಂದ ನಿನ್ನ ಆಶ್ರಯದಲ್ಲಿ ಬಂದು ನೆಲೆಸಿದ ಎಲ್ಲಾ ಯೆಹೂದ್ಯರು ಮತ್ತೆ ಬೇರೆಬೇರೆ ದೇಶಗಳಲ್ಲಿ ಚದುರಿ ಹೋಗಬೇಕಾಗುತ್ತದೆ. ಆಗ ಅಳಿದುಳಿದ ಕೆಲವೇ ಜನ ಯೆಹೂದಿಗಳು ಸಹ ಇಲ್ಲವಾಗುತ್ತಾರೆ.”