2 ಸಮುಯೇಲ 21:2 - ಪರಿಶುದ್ದ ಬೈಬಲ್2 (ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 (ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 (ಗಿಬ್ಯೋನ್ಯರು ಇಸ್ರಾಯೇಲ್‍ಕುಲಗಳಿಗೆ ಸೇರಿದವರಲ್ಲ; ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವದಿಲ್ಲವೆಂದು ಪ್ರಮಾಣ ಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದಕುಲಗಳ ಮೇಲೆ ತನಗಿದ್ದ ಅಭಿಮಾನದ ದೆಸೆಯಿಂದ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು. ಅಧ್ಯಾಯವನ್ನು ನೋಡಿ |