Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:20 - ಪರಿಶುದ್ದ ಬೈಬಲ್‌

20 ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:20
4 ತಿಳಿವುಗಳ ಹೋಲಿಕೆ  

ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.


ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.


ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು.


ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು