Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:21 - ಪರಿಶುದ್ದ ಬೈಬಲ್‌

21 ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಇಸ್ರಾಯೇಲ್ಯರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:21
11 ತಿಳಿವುಗಳ ಹೋಲಿಕೆ  

ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.


ಅನಂತರ ಇಷಯನು ಶಮ್ಮನನ್ನು ಸಮುವೇಲನ ಬಳಿಗೆ ಕಳುಹಿಸಿದನು. ಆದರೆ ಸಮುವೇಲನು, “ಯೆಹೋವನು ಇವನನ್ನೂ ಆರಿಸಲಿಲ್ಲ” ಎಂದನು.


ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು.


ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ?” (ಅವರೆಲ್ಲರೂ ಹತರಾದರು!)


ಫಿಲಿಷ್ಟಿಯರು ಒಂದು ಗುಡ್ಡದ ಮೇಲೂ ಇಸ್ರೇಲರು ಮತ್ತೊಂದು ಗುಡ್ಡದ ಮೇಲೂ ನಿಂತರು. ಕಣಿವೆಯು ಆ ಎರಡು ಗುಡ್ಡಗಳ ಮಧ್ಯೆ ಇದ್ದಿತು.


ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.


ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು.


ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು