2 ಸಮುಯೇಲ 21:4 - ಪರಿಶುದ್ದ ಬೈಬಲ್4 ಗಿಬ್ಯೋನ್ಯರು ದಾವೀದನಿಗೆ, “ಸೌಲನ ಬೆಳ್ಳಿಬಂಗಾರವಾಗಲಿ ಅವನ ಮನೆಯಾಗಲಿ ನಮಗೆ ಬೇಕಾಗಿಲ್ಲ ಮತ್ತು ಇಸ್ರೇಲಿನ ಯಾವ ವ್ಯಕ್ತಿಯನ್ನೂ ಕೊಲ್ಲಲು ನಮಗೆ ಹಕ್ಕಿಲ್ಲ” ಎಂದು ಹೇಳಿದರು. ದಾವೀದನು, “ಆದರೆ ನಿಮಗಾಗಿ ನಾನು ಏನು ಮಾಡಲಿ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯ ಬೆಳ್ಳಿಬಂಗಾರದಿಂದ ತೀರಲಾರದು; ಇಸ್ರಯೇಲರನ್ನು ಕೊಲ್ಲುವ ಅಧಿಕಾರ ನಮಗಿಲ್ಲ,” ಎಂದು ಉತ್ತರಕೊಟ್ಟರು. ಅರಸನು ಅವರಿಗೆ, “ಏನು ಮಾಡಬೇಕು ಹೇಳಿ; ಮಾಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದಕ್ಕೆ ಅವರು - ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿಬಂಗಾರದಿಂದ ತೀರಲಾರದು; ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ ಎಂದು ಉತ್ತರ ಕೊಡಲು ಅರಸನು ಅವರಿಗೆ - ಏನು ಮಾಡಬೇಕು ಹೇಳಿರಿ, ಮಾಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಗಿಬ್ಯೋನ್ಯರು ಅವನಿಗೆ, “ಸೌಲನ ಕೈಯಿಂದಲಾದರೂ, ಅವನ ಮನೆಯವರ ಕೈಯಿಂದಲಾದರೂ, ನಮಗೆ ಬೆಳ್ಳಿಯಾದರೂ, ಬಂಗಾರವಾದರೂ ಬೇಡ. ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕಬೇಕೆಂಬುದು ನಮಗೆ ಅಗತ್ಯವಿಲ್ಲ,” ಎಂದರು. ಆಗ ಅವನು, “ನೀವು ನನಗೆ ಏನು ಹೇಳುತ್ತೀರೋ, ನಾನು ನಿಮಗೆ ಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |