7 ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್.
ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.
ಯೋನಾತಾನನೇ, ನನ್ನ ಮೇಲೆ ದಯೆಯಿರಲಿ. ನಾನು ನಿನ್ನ ಸೇವಕ. ನೀನು ಯೆಹೋವನ ಮುಂದೆ ನನ್ನೊಂದಿಗೆ ಒಪ್ಪಂದ ಮಾಡಿಕೊಂಡಿರುವೆ. ನಾನು ತಪ್ಪಿತಸ್ಥನಾಗಿದ್ದರೆ, ನೀನೇ ನನ್ನನ್ನು ಕೊಂದುಬಿಡು! ಆದರೆ ನಿನ್ನ ತಂದೆಯ ಹತ್ತಿರಕ್ಕೆ ನನ್ನನ್ನು ಕರೆದೊಯ್ಯಬೇಡ” ಎಂದು ಹೇಳಿದನು.
ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.
ಯೋನಾತಾನನು ದಾವೀದನಿಂದ ತನ್ನ ಪ್ರೀತಿಯ ವಾಗ್ದಾನವನ್ನು ಮತ್ತೆ ಹೇಳಿಸಿದನು. ಯೋನಾತಾನನು ತನ್ನನ್ನು ತಾನು ಪ್ರೀತಿಸುತ್ತಿದ್ದಷ್ಟೆ ದಾವೀದನನ್ನೂ ಪ್ರೀತಿಸುತ್ತಿದ್ದುದ್ದೇ ಅದಕ್ಕೆ ಕಾರಣ.
ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.
ಯೋನಾತಾನನು ದಾವೀದನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಎದುರಿನಲ್ಲಿ ಈ ಪ್ರಮಾಣವನ್ನು ಮಾಡುತ್ತೇನೆ. ನನ್ನ ತಂದೆಯು ನಿನ್ನ ಬಗ್ಗೆ ಒಳ್ಳೆಯ ಭಾವನೆಯನ್ನು ಹೊಂದಿರುವನೊ ಇಲ್ಲವೊ ಎಂಬುದನ್ನು ತಿಳಿದುಕೊಳ್ಳುತ್ತೇನೆ. ನಂತರ ಸಂದೇಶವೊಂದನ್ನು ನಾನು ಮೂರು ದಿನಗಳೊಳಗಾಗಿ ನಿನಗೆ ಕಳುಹಿಸಿಕೊಡುತ್ತೇನೆ.
ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫೀಬೋಶೆತನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.