Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:10 - ಪರಿಶುದ್ದ ಬೈಬಲ್‌

10 ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:10
12 ತಿಳಿವುಗಳ ಹೋಲಿಕೆ  

ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಯೆಹೋವನೇ, ಆಕಾಶವನ್ನು ಹರಿದು ಇಳಿದು ಬಾ. ಪರ್ವತಗಳನ್ನು ಮುಟ್ಟು. ಆಗ ಅವುಗಳಿಂದ ಹೊಗೆಯು ಮೇಲೇರುವುದು.


ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.


ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.


ಆಗ ನೀವು ಬೆಟ್ಟದ ಸಮೀಪಕ್ಕೆ ಬಂದು ನಿಂತುಕೊಂಡಿರಿ. ಆ ಪರ್ವತವು ಬೆಂಕಿಯಿಂದ ಪ್ರಜ್ವಲಿಸಿ ಆಕಾಶದ ತನಕ ಮುಟ್ಟಿತ್ತು. ಆಗ ಕಾರ್ಮೋಡವೂ ಕತ್ತಲೆಯೂ ಆವರಿಸಿತು.


ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.


ಕೆಲವರು ನಿನ್ನನ್ನು ಅನುಸರಿಸುವದಿಲ್ಲ. ಅವರು ನಿನ್ನ ಹೆಸರಿನಿಂದ ಕರೆಯಲ್ಪಡುವದಿಲ್ಲ. ನಾವು ಅವರಂತೆ ಇದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು