Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:17 - ಪರಿಶುದ್ದ ಬೈಬಲ್‌

17 ಆತನು ಮೇಲಿನ ಲೋಕದಿಂದ ಕೆಳಗಿಳಿದನು. ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೇಲಣಾಲೋಕದಿಂದ ಹಿಡಿದುಕೊಂಡ ಎನ್ನನು ಕೈಚಾಚಿ ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:17
12 ತಿಳಿವುಗಳ ಹೋಲಿಕೆ  

ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.


ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.


ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು.


ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.


ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.


ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತುಹೋಗುತ್ತೇನೆ” ಎಂದುಕೊಂಡೆನು.


ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು