2 ಸಮುಯೇಲ 22:3 - ಪರಿಶುದ್ದ ಬೈಬಲ್3 ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ನನ್ನ ಶರಣನೂ ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!