Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:38 - ಪರಿಶುದ್ದ ಬೈಬಲ್‌

38 ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸದೆಬಡಿವೆನು ಶತ್ರುಗಳನು ಬೆನ್ನಟ್ಟಿ ಅವರನು ನಿರ್ಮೂಲ ಮಾಡದೆ ಬರೆ ಹಿಂದಿರುಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:38
9 ತಿಳಿವುಗಳ ಹೋಲಿಕೆ  

ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ಅರಾಮ್ಯರು ಓಡಿಹೋಗುತ್ತಿರುವುದನ್ನು ನೋಡಿದ ಅಮ್ಮೋನಿಯರು ಅಬೀಷೈಯನ್ನು ಬಿಟ್ಟು ಓಡಿಹೋದರು. ಅವರು ತಮ್ಮ ನಗರಕ್ಕೆ ಹಿಂದಿರುಗಿದರು. ಯೋವಾಬನು ಯುದ್ಧರಂಗದಿಂದ ಹಿಂದಿರುಗಿ ಜೆರುಸಲೇಮಿಗೆ ಬಂದನು.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.


ನೀನು ಹೋದ ಸ್ಥಳಗಳಲ್ಲೆಲ್ಲಾ ನಿನ್ನೊಂದಿಗಿದ್ದೆನು. ನಿನ್ನ ಶತ್ರುಗಳನ್ನು ಸೋಲಿಸಿದೆನು. ನಾನು ನಿನ್ನನ್ನು ಲೋಕದ ಇತರ ಮಹಾಪುರುಷರಂತೆಯೇ ಪ್ರಸಿದ್ಧಿಗೊಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು